ಧಾರವಾಡ: ಧಾರವಾಡದ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯ ಓಪಿಡಿ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಲಾಬುರಾಮ್, ಡಿಎಚ್‌ಓ ಡಾ.ಯಶವಂತ ಮದೀನಕರ ಆಸ್ಪತ್ರೆಯ ಓಪಿಡಿ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ.
ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ 182 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಹೊರಗಿನಿಂದ ಬರುವವರಿಗೆ ಸೋಂಕು ತಾಕದಿರಲಿ ಎಂದು ಈ ನಿರ್ಧಾರ ಕೈಗೊಳ್ಳಲಾಗಿದ್ದು, ತುರ್ತು ವೈದ್ಯಕೀಯ ಸೇವೆಗೆ ಅನುಮತಿ ನೀಡಲಾಗಿದೆ.
ಆಸ್ಪತ್ರೆಯ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿರುವ ಶಾಲಾ, ಕಾಲೇಜುಗಳಿಗೂ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ. ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರನ್ನೂ ಇದೀಗ ಕೊರೊನಾ ತಪಾಸಣೆಗೊಳಪಡಿಸಲಾಗುತ್ತಿದೆ.
PublicNext
26/11/2021 02:28 pm