ಆನೇಕಲ್ : ಆನೇಕಲ್ ತಾಲೂಕಿನ ಮರಸೂರು ಗೇಟ್ ನಲ್ಲಿರುವ ಸ್ಫೂರ್ತಿ ನರ್ಸಿಂಗ್ ಕಾಲೇಜಿನಲ್ಲಿ ಕೊರೊನಾ ಸ್ಫೋಟಗೊಂಡಿದೆ. ಒಟ್ಟು 12 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದ್ದು,ಉಳಿದ 106 ವಿದ್ಯಾರ್ಥಿಗಳ ಸೋಂಕಿನ ಫಲಿತಾಂಶ ಹೊರಬೀಳಬೇಕಿದೆ.
ಸದ್ಯ 9 ಸೋಂಕಿತರನ್ನು ಜಿಗಣಿಯ ಕೋವಿಡ್ ಕೇರ್ ಸೆಂಟರ್ ಗೆ ದಾಖಲು ಮಾಡಲಾಗಿದ್ದು ಉಳಿದವರನ್ನು ಹೋಮ್ ಐಸೋಲೇಷನ್ ಮಾಡಲಾಗಿದೆ ಎಂದು ಆನೇಕಲ್ ತಾಲ್ಲೂಕು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಇನ್ನು ಸ್ಫೂರ್ತಿ ಕಾಲೇಜಿನಲ್ಲಿ ಕೊರೊನಾ ಸ್ಫೋಟದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಜಿಲ್ಲಾಧಿಕಾರಿ ಮಂಜುನಾಥ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ವೈದ್ಯಾಧಿಕಾರಿ ಗಳು ಹಾಗೂ ಆಡಳಿತ ಮಂಡಳಿ ಜೊತೆ ಚರ್ಚೆ ನಡೆಸುತ್ತಿರುವ ಡಿಸಿ ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
PublicNext
27/11/2021 12:05 pm