ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೊರೊನಾ ತನ್ನ ಬಾಹುಗಳನ್ನು ಚಾಚುವ ಲಕ್ಷಣ ಕಂಡುಬರುತ್ತಿವೆ. ಕಳೆದ 24 ಗಂಟೆಗಳಲ್ಲಿ 322 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೂವರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,95,285 ಜನರಿಗೆ ಸೋಂಕು ತಗುಲಿದ್ದು 38,196 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 176 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,50,306 ಕ್ಕೆ ಏರಿಕೆಯಾಗಿದೆ. ಇನ್ನು 6,754 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 0.34%ನಷ್ಟಿದೆ. ಹಾಗೂ ಮರಣ ಪ್ರಮಾಣ 0.93%ನಷ್ಟಿದೆ. ಇದೇ ಅವಧಿಯಲ್ಲಿ 94,651 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 149 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,55,984ಕ್ಕೆ ಏರಿಕೆಯಾಗಿದೆ. 105 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,34,377ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 16,327 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,279 ಸಕ್ರಿಯ ಪ್ರಕರಣಗಳಿವೆ.
PublicNext
27/11/2021 08:01 pm