ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಓಮಿಕ್ರಾನ್ ಭೀತಿ: 3 ದೇಶಗಳಿಂದ ರಾಜ್ಯಕ್ಕೆ ಬರುವವರಿಗೆ RTPCR ಪರೀಕ್ಷೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಕ್ಲಸ್ಟರ್‌ಗಳ ಸಂಖ್ಯೆ ಹೆಚ್ಚಳದ ಭೀತಿಯ ನಡುವೆಯೇ ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಆಂತಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ 3 ದೇಶ (ದಕ್ಷಿಣ ಆಫ್ರಿಕಾ, ಹಾಂಕಾಂಗ್ ಹಾಗೂ ಬೋಟ್ಸ್ವಾನಾ)ಗಳಿಂದ ರಾಜ್ಯಕ್ಕೆ ಬರುವವರಿಗೆ RTPCR ಟೆಸ್ಟ್‌ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. 15 ದಿನಗಳ ಹಿಂದೆ ರಾಜ್ಯಕ್ಕೆ ಬಂದಿರುವವರನ್ನೂ ಪತ್ತೆ ಹಚ್ಚಬೇಕು. ಪತ್ತೆ ಹಚ್ಚಿ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಬೇಕು. ಟೆಸ್ಟ್‌ ಮಾಡಿ 10 ದಿನಗಳ ಕಾಲ ಐಸೋಲೇಷನ್ ಮಾಡಬೇಕು. ನೆಗೆಟಿವ್ ರಿಪೋರ್ಟ್ ಬಂದರೂ ಐಸೋಲೇಷನ್ ಮಾಡಬೇಕು. ಕೊರೊನಾ ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮಾಡಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ತೀರ್ಮಾನಗಳು:

1. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

2. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು

3. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ

4. ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು

5. 16 ನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು

6. ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು

7. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವೀಕ್ಷಣೆ ಕೈಗೊಳ್ಳುವುದು

8. ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು

9. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು

10. ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು

11. ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ

12. ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು

Edited By : Vijay Kumar
PublicNext

PublicNext

27/11/2021 10:59 pm

Cinque Terre

75.62 K

Cinque Terre

4

ಸಂಬಂಧಿತ ಸುದ್ದಿ