ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಆತಂಕ ಶುರುವಾಗಿರುವ ಬೆನ್ನಲ್ಲಿ ರಾಜಧಾನಿ ಬೆಂಗಳೂರಿನ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಕ್ಷಿಣ ಆಫ್ರಿಕಾದಿಂದ ಇಂದು ಬಂದಿಳಿದ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರಲ್ಲಿ ಕಂಡುಬಂದಿರುವ ವೈರಸ್ ಹೊಸ ರೂಪಾಂತರಿಯೇ ಅನ್ನೋ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ.
ಹೊರ ದೇಶಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ. ರಾಜ್ಯ ರಾಜಧಾನಿಯಲ್ಲಿ ನಿನ್ನೆ (ಶನಿವಾರ) 149 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು 12,34,377 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
PublicNext
28/11/2021 07:39 am