ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,774 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 621 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ 9,481 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 3,39,98,278 ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿವರೆಗೆ ದೇಶದಾದ್ಯಂತ 3,45,72,523 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 4,68,554 ಮಂದಿ ಮೃತಪಟ್ಟಿದ್ದಾರೆ. ಒಟ್ಟು 1,05,691 ಸಕ್ರಿಯ ಪ್ರಕರಣಗಳಿವೆ.
PublicNext
28/11/2021 12:57 pm