ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಲ್ಲುವ ಲಕ್ಷಣಗಳು ಸದ್ಯಕ್ಕಂತೂ ಕಾಣುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ 315 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,95,600 ಜನರಿಗೆ ಸೋಂಕು ತಗುಲಿದ್ದು, 38,198 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 236 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,50,542ಕ್ಕೆ ಏರಿಕೆಯಾಗಿದೆ. ಇನ್ನು 6,831 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತಯ ಪ್ರಮಾಣ 0.40%ನಷ್ಟಿದೆ. ಹಾಗೂ ಮರಣ ಪ್ರಮಾಣ 0.63%ನಷ್ಟಿದೆ. ಇದೇ ಅವಧಿಯಲ್ಲಿ 77,818 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರೆದಿದೆ. ಇಂದು 152 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,56,136 ಕ್ಕೆ ಏರಿಕೆಯಾಗಿದೆ. 142 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,34,519ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,329 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 5,287 ಸಕ್ರಿಯ ಪ್ರಕರಣಗಳಿವೆ.
PublicNext
28/11/2021 06:59 pm