ತುಮಕೂರು: ರಾಜ್ಯಕ್ಕೆ ಕೊರೊನಾ ಮೂರನೇ ಅಲೆ ಭೀತಿ ಇದೆ. ಈ ಹಿನ್ನೆಲೆ ಮೂರನೇ ಅಲೆ ಬಗ್ಗೆ ನಾವು ನಿಗಾ ವಹಿಸಿದ್ದೇವೆ. ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ತುಮಕೂರು ಸಿದ್ಧಗಂಗಾ ಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಪರೀಕ್ಷೆ ನಡೆಸಿದ ಎಲ್ಲ ಸ್ಯಾಂಪಲ್‌ಗಳನ್ನು ಡೆಲ್ಟಾ ಅಥವಾ ಓಮಿಕ್ರಾನ್ ಎನ್ನುವುದನ್ನು ಖಾತ್ರಿ ಪಡಿಸಿಕೊಳ್ಳಲು ಕಳುಹಿಸುತ್ತಿದ್ದೇವೆ. ವಿಮಾನ ನಿಲ್ದಾಣ ಹಾಗೂ ಕೇರಳದಿಂದ ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಕಂಟೈನ್ಮೆಂಟ್ ಜೋನ್ ಮಾಡೋ ಮೂಲಕ ನಿಯಂತ್ರಣದಲ್ಲಿಡಲು ಪ್ರಯತ್ನಿಸುತ್ತಿದ್ದೇವೆ. ಶಾಲೆ,ಕಾಲೇಜುಗಳಲ್ಲೂ ಸಹ ಹೆಚ್ಚಿನ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಇನ್ನು ಅತಿವೃಷ್ಟಿ ಪರಿಹಾರ ಕುರಿತಾಗಿ ಮಾತನಾಡಿದ ಅವರು, ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪರಿಹಾರ ಕೊಟ್ಟಿದ್ದೇವೆ. ಇನ್ನೂ ಹೆಚ್ಚಿನ ಪರಿಹಾರ ಬೇಕಿದ್ದರೆ ಕೊಡಲು ಸಿದ್ದರಿದ್ದೇವೆ. ಈಗಾಗಲೇ ಆರ್ಥಿಕ ಇಲಾಖೆಯಿಂದ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರಕ್ಕೆ ಪತ್ರ ಬರೆದು ತಂಡವನ್ನ ಸಮೀಕ್ಷೆಗೆ ಕಳುಹಿಸುವಂತೆ ಕೇಳಿಕೊಂಡಿದ್ದೇವೆ ಎಂದರು.
PublicNext
29/11/2021 12:50 pm