ಬೆಂಗಳೂರು : ರಾಜ್ಯದಲ್ಲಿಂದು 257 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2995857 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 56825 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.45% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 205 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2950747 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 05 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38203 ಕ್ಕೆ ಏರಿಕೆಯಾಗಿದೆ. 6878 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.94%ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 131 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1256267 ಕ್ಕೆ ಏರಿಕೆಯಾಗಿದೆ. 108 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1234627 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 2 ಸಾವು ಸಂಭವಿಸಿದ್ದು ಈವೆರಗೂ ಒಟ್ಟು 16331 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5308 ಸಕ್ರಿಯ ಪ್ರಕರಣಗಳಿವೆ.
PublicNext
29/11/2021 06:42 pm