ದಾವಣಗೆರೆ: ಹಳೇ ದಾವಣಗೆರೆ ಭಾಗದಲ್ಲಿ ಕೊರೊನಾ ಲಸಿಕೆ ಪಡೆಯಲು ವಿವಿಧ ಕಾರಣಗಳನ್ನು ನೀಡಿ ಬಚಾವಾಗಲು ಪ್ರಯತ್ನಿಸುತ್ತಿದ್ದವರಿಗೆ ಅವರದೇ ಧಾಟಿಯಲ್ಲಿ ಉತ್ತರ ನೀಡುವ ಮೂಲಕ ಲಸಿಕೆ ನೀಡಲಾಯಿತು.
ಲಸಿಕೆ ಪಡೆಯಲು ಪ್ರತಿರೋಧ ತೋರುತ್ತಿದ್ದವರಿಗೆ ಒತ್ತಡ ತಂತ್ರದ ಮೂಲಕವೂ ಲಸಿಕೆ ನೀಡಲಾಯಿತು. ಕೆಲವರು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ನೇತೃತ್ವದ ತಂಡ ಬರುತ್ತಿದ್ದಂತೆ ಮನೆ ಬಾಗಿಲು ಹಾಕಿ ಪ್ರತಿರೋಧ ಒಡ್ಡಿದ ಜನರಿಗೆ ಕೊನೆಗೂ ಲಸಿಕೆ ನೀಡಲಾಯಿತು.
ಬುಧವಾರ ಹಳೆ ದಾವಣಗೆರೆ ಭಾಗದ ಭಾಷಾನಗರ, ಮುಸ್ತಫಾ ನಗರ, ಶಿವ ನಗರಗಳಲ್ಲಿ ಮನೆ ಮನೆಗಳಿಗೆ ತೆರಳಿ ಲಸಿಕೆ ಹಾಕಲಾಯಿತು. ಶಿವ ನಗರದಲ್ಲಿ ಸಾಕಷ್ಟು ಮನೆಗಳವರು ಲಸಿಕಾ ತಂಡ ನೋಡುತ್ತಿದ್ದಂತೆ ಓಡಿಹೋಗಿ ಬಾಗಿಲುಗಳನ್ನು ಬಂದ್ ಮಾಡಿಕೊಂಡರು, ಹಲವರು ಮೈಗೆ ಹುಷಾರಿಲ್ಲ, ಆಧಾರ್ ಕಾರ್ಡ್ ಇಲ್ಲ, ಎಂಬಿತ್ಯಾದಿ ಕಾರಣಗಳನ್ನು ಹೇಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಬಿಡದೆ ಲಸಿಕೆ ನೀಡಲಾಯಿತು.
ನಂತರ ಮಾಧ್ಯಮದವರ ಜೊತೆ ಮಾತನಾಡಿದ ಡಿಸಿ, ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ ಕಡಿತದ ಬಗೆ ನಿರ್ದೇಶನವಿಲ್ಲ, ಆದರೂ ಹೊಸದಾಗಿ ಬರುತ್ತಿರುವ ಓಮಿಕ್ರಾನ್ನಿಂದ ಬಚಾವಾಗಲು ಲಸಿಕೆ ಅನಿವಾರ್ಯ ಎಂಬುದನ್ನು ಮನದಟ್ಟು ಮಾಡಲಾಗುತ್ತಿದೆ ಎಂದರು.
PublicNext
01/12/2021 06:42 pm