ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ದೇಶದಲ್ಲೇ ಕರ್ನಾಟಕಕ್ಕೆ ಓಮಿಕ್ರೋನ್ ಮೊದಲ ಎಂಟ್ರಿ

ಬೆಂಗಳೂರು: ದೇಶದಲ್ಲಿ ಮೊದಲ ಓಮಿಕ್ರೋನ್ ಕೇಸ್ ಪತ್ತೆಯಾಗಿದೆ. ವಿಚಿತ್ರವೆಂದರೆ ಅದು ನಮ್ಮ ರಾಜ್ಯದಲ್ಲೇ ಎನ್ನುವುದು ವಿಪರ್ಯಾಸ.

ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್‌ ಹೊಸ ರೂಪಾಂತರ ಓಮಿಕ್ರಾನ್ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬೆಂಗಳೂರಿನ ಇಬ್ಬರಿಗೆ ಕೊರೊನಾ ವೈರಸ್‌ನ ಹೊಸ ರೂಪಾಂತರ ಓಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ.

ಓಮಿಕ್ರಾನ್ ದೃಢಪಟ್ಟ ಇಬ್ಬರೂ ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ಇವರು ನವೆಂಬರ್‌ ಮೊದಲ ವಾರ ಬೆಂಗಳೂರಿಗೆ ಬಂದಿದ್ದರು. ಓಮಿಕ್ರಾನ್ ಪೀಡಿತರಲ್ಲಿ ಒಬ್ಬ ಬೊಮ್ಮನಹಳ್ಳಿ ಮೂಲದ ನಿವಾಸಿ ಎಂಬ ಮಾಹಿತಿ ಸಿಕ್ಕಿದೆ. ಇವರಿಬ್ಬರ ಸಂಪರ್ಕದಲ್ಲಿದ್ದವರನ್ನು ಗುರುತಿಸಲಾಗಿದ್ದು, ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಹೊಸ ರೂಪಾಂತರಿ ಪತ್ತೆಯಾಗಿರುವುದರಿಂದ ಸರ್ಕಾರ ಅಲರ್ಟ್‌ ಆಗಿದೆ.

Edited By : Vijay Kumar
PublicNext

PublicNext

02/12/2021 04:33 pm

Cinque Terre

88.7 K

Cinque Terre

26