ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗದ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೊನಾ

ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೊನಾ ಸ್ಪೋಟವಾಗಿದೆ. ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕಾಲೇಜ್ ಹಾಗೂ ಆಸ್ಪತ್ರೆಯನ್ನು ಸೀಲ್ಡೌ್ನ್ ಮಾಡಲಾಗಿದೆ.

ಜಿಲ್ಲೆಯಲ್ಲಿರುವ ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಅನ್ಯರಾಜ್ಯದವರೇ ಹೆಚ್ಚಿದ್ದಾರೆ. ಶಿವಮೊಗ್ಗದ ನಂಜಪ್ಪ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಕೇರಳದಿಂದ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಕೇರಳಕ್ಕೆ ಹೋಗಿ ಬಂದ ವಿದ್ಯಾರ್ಥಿಗಳಲ್ಲಿ ಆರಂಭದಲ್ಲಿ ಶೀತ ಹಾಗೂ ಜ್ವರ ಕಾಣಿಸಿಕೊಂಡಿತ್ತು.

ವಿದ್ಯಾರ್ಥಿಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಆಗ ಕೆಲ ವಿದ್ಯಾರ್ಥಿಗಳಲ್ಲಿ ಕೋವಿಡ್ ಇರುವುದು ದೃಢಪಟ್ಟಿತ್ತು. ನಂತರ ಎಚ್ಚೆತ್ತ ಜಿಲ್ಲಾಡಳಿತ ನರ್ಸಿಂಗ್ ಕಾಲೇಜಿನ ಎಲ್ಲ ವಿದ್ಯಾರ್ಥಿಗಳನ್ನು, ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಿದಾಗ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

Edited By : Nagaraj Tulugeri
PublicNext

PublicNext

03/12/2021 07:49 am

Cinque Terre

30.15 K

Cinque Terre

0

ಸಂಬಂಧಿತ ಸುದ್ದಿ