ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ (ಶುಕ್ರವಾರಕ್ಕಿಂತ) ಕೊಂಚ ಇಳಿಕೆ ಕಂಡಿದೆ. ಶುಕ್ರವಾರ 413 ಜನರಿಗೆ ಸೋಂಕು ದೃಢಪಟ್ಟಿದ್ದರೆ, ಇಂದು 397 ಜನರಿಗೆ ಸೋಂಕು ದೃಢಪಟ್ಟಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಈವರೆಗೂ 29,97,643 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.35ನಷ್ಟಿದೆ. ಇಂದು 1,12,937 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 277 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,52,378 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,224ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 7,012 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.00ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 207 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,57,242ಕ್ಕೆ ಏರಿಕೆಯಾಗಿದೆ 159 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,35,802ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,343 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,096 ಸಕ್ರಿಯ ಪ್ರಕರಣಗಳಿವೆ.
PublicNext
04/12/2021 07:52 pm