ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ರೂಪಾಂತರ ಓಮಿಕ್ರಾನ್ ಕೇಸ್‌ಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ಸದ್ಯ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದೇಶದ 5 ಓಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇತ್ತೀಚಿಗೆ ತಾಂಜೇನಿಯಾದಿಂದ ವಾಪಸ್ ಆಗಿದ್ದ ದೆಹಲಿ ಮೂಲದ ವ್ಯಕ್ತಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಸೋಂಕಿತನನ್ನ ನಗರದ ಎಲ್ಎನ್ಜೆಪಿ ಆಸ್ಪತ್ರೆಯಲ್ಲು ಕ್ವಾರಂಟೀನ್ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದೂವರೆಗೆ ಕರ್ನಾಟಕದಲ್ಲಿ 2, ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ತಲಾ 1 ಓಮಿಕ್ರಾನ್ ಕೇಸ್ ದೃಢಪಟ್ಟಿದ್ದವು.
PublicNext
05/12/2021 11:54 am