ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ನಿನ್ನೆಗಿಂತ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 456 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಆರು ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ,ರಾಜ್ಯದಲ್ಲಿ ಈವರೆಗೂ 29,98,099 ಜನರಿಗೆ ಸೋಂಕು ತಗುಲಿದ್ದು ಇದರಲ್ಲಿ ಇದುವರೆಗೆ 38,230 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 330 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,52,708ಕ್ಕೆ ಏರಿಕೆಯಾಗಿದೆ. ಇನ್ನು 7,132 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 0.41%ನಷ್ಟಿದೆ. ಹಾಗೂ ಮರಣ ಪ್ರಮಾಣ 1.31%ನಷ್ಟಿದೆ. ಇದೇ ಅವಧಿಯಲ್ಲಿ 1,10,556 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಈಗಲೂ ಮುಂದುವರಿದಿದೆ. ಇಂದು 256 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,57,498ಕ್ಕೆ ಏರಿಕೆಯಾಗಿದೆ. 214 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,36,016ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,345 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,136 ಸಕ್ರಿಯ ಪ್ರಕರಣಗಳಿವೆ.
PublicNext
05/12/2021 06:46 pm