ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಇನ್ನೂ ಸಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 301 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 7 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,98,400 ಜನರಿಗೆ ಸೋಂಕು ತಗುಲಿದ್ದು, 38,237 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 359 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,53,067 ಕ್ಕೆ ಏರಿಕೆಯಾಗಿದೆ. ಇನ್ನು 7,067 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣದ 0.34%ನಷ್ಟಿದೆ. ಹಾಗೂ ಮರಣ ಪ್ರಮಾಣ 2.32%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 88,387 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆ ಮಾಡಲು ಪರೀಕ್ಷೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 162 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,57,660ಕ್ಕೆ ಏರಿಕೆಯಾಗಿದೆ. 116ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,36,132ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,348 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 5,179 ಸಕ್ರಿಯ ಪ್ರಕರಣಗಳಿವೆ.
PublicNext
06/12/2021 06:59 pm