ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು 399 ಜನರಿಗೆ ಸೋಂಕು, 6 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ಪ್ರಕರಣಗಳು ನಿನ್ನೆಗಿಂತ ಇಂದು ಕೊಂಚ ಹೆಚ್ಚಾಗಿವೆ. ಕಳೆದ 24 ಗಂಟೆಗಳಲ್ಲಿ 399 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದಾರೆ. 6 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,99,098 ಜನರಿಗೆ ಸೋಂಕು ತಗುಲಿದ್ದು, 38,249 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 238 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2953565 ಕ್ಕೆ ಏರಿಕೆಯಾಗಿದೆ. ಇನ್ನು 7,255 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ 0.34%ದಷ್ಟಿದೆ. ಹಾಗೂ ಮರಣ ಪ್ರಮಾಣ 1.50%ದಷ್ಟಿದೆ. ಇದೇ ಅವಧಿಯಲ್ಲಿ 1,16,141 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 244 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,58,119ಕ್ಕೆ ಏರಿಕೆಯಾಗಿದೆ. 100 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,36,329ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,354 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,435 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

08/12/2021 07:58 pm

Cinque Terre

51.6 K

Cinque Terre

1

ಸಂಬಂಧಿತ ಸುದ್ದಿ