ಬೆಂಗಳೂರು : ರಾಜ್ಯದಲ್ಲಿಂದು 314 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2999785 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 119766 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.26% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 339 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2954196 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 02 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38255 ಕ್ಕೆ ಏರಿಕೆಯಾಗಿದೆ. 7305 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.63%ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 179 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1258509 ಕ್ಕೆ ಏರಿಕೆಯಾಗಿದೆ. 204 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1236666 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 02 ಸಾವು ಸಂಭವಿಸಿದ್ದು ಈವೆರಗೂ ಒಟ್ಟು 16360 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5482 ಸಕ್ರಿಯ ಪ್ರಕರಣಗಳಿವೆ.
PublicNext
10/12/2021 07:19 pm