ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಕೊಂಚ ಇಳಿಕೆ ಕಂಡಿದೆ. ಇನ್ನು ಒಟ್ಟು ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 320 ಮಂದಿಗೆ ಸೋಂಕು ತಗುಲಿದ್ದು, ಈವರೆಗೂ 30,00,105 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.30ನಷ್ಟಿದೆ. ಇಂದು 1,05,978 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 317 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,54,513 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,257ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 7,306 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.62ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 190 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,58,699ಕ್ಕೆ ಏರಿಕೆಯಾಗಿದೆ 123 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,36,789ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ನಾಲ್ವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,362 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,547 ಸಕ್ರಿಯ ಪ್ರಕರಣಗಳಿವೆ.
PublicNext
11/12/2021 07:37 pm