ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಇದೆ. ಕಳೆದ 24 ಗಂಟೆಗಳಲ್ಲಿ 330 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು,4 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 30,00,435 ಜನರಿಗೆ ಸೋಂಕು ತಗುಲಿದ್ದು, 38,261 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 304 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,54,817 ಕ್ಕೆ ಏರಿಕೆಯಾಗಿದೆ. ಇನ್ನು 7,328 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ 0.27%ದಷ್ಟಿದೆ. ಹಾಗೂ ಮರಣ ಪ್ರಮಾಣ 1.21%ದಷ್ಟಿದೆ. ಹಾಗ ಇದೇ ಅವಧಿಯಲ್ಲಿ 1,18,696 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 205 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,58,904ಕ್ಕೆ ಏರಿಕೆಯಾಗಿದೆ. 147ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,36,936ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾ ಸೋಂಕಿನಿಂದ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,365 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,602 ಸಕ್ರಿಯ ಪ್ರಕರಣಗಳಿವೆ.
PublicNext
12/12/2021 07:44 pm