ದೇವನಹಳ್ಳಿ : ವಿದೇಶದಿಂದ ಬರುತ್ತಿರುವ ಪ್ರಯಾಣಿಕರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಂದು ಮುಂಜಾನೆ ಭಾರತಕ್ಕೆ ಬಂದ 5 ಜನರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ.
ಇಂದು ಬೆಳ್ಳಂಬೆಳಗ್ಗೆ ಯುಕೆಯಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಆಗಮಿಸಿದ್ದು, ಪ್ರಯಾಣಿಕರನ್ನು ಆರ್ ಟಿ ಪಿಸಿಆರ್ ಟೆಸ್ಟ್ ಗೆ ಒಳಪಡಿಸಿದಾಗ ಐವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
18 ವರ್ಷದ ಇಬ್ಬರಿಗೆ, 6 ವರ್ಷದ ಇಬ್ಬರು ಮಕ್ಕಳಿಗೆ ಮತ್ತು 30 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ವರದಿಯಲ್ಲಿ ಧೃಡಪಟ್ಟಿದ್ದು, ಸೋಂಕಿತರನ್ನು ಕೆಐಎಎಲ್ ನಿಂದ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
PublicNext
13/12/2021 03:02 pm