ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮುಂದುವರೆದ ಕೊರೊನಾ ಹಾವು ಏಣಿ ಆಟ : ಇಂದು 236 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು 236 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3000671 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 80217 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.29% ಕ್ಕೆ ಕುಸಿದಿದೆ.

ರಾಜ್ಯದಲ್ಲಿ ಇಂದು 321 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2955138 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 07 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38268 ಕ್ಕೆ ಏರಿಕೆಯಾಗಿದೆ. 7236 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.96% ನಷ್ಟಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 121 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1259025 ಕ್ಕೆ ಏರಿಕೆಯಾಗಿದೆ. 188 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1237124 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 04 ಸಾವು ಸಂಭವಿಸಿದ್ದು ಈವೆರಗೂ ಒಟ್ಟು 16369 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5531 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
PublicNext

PublicNext

13/12/2021 06:56 pm

Cinque Terre

27.14 K

Cinque Terre

0

ಸಂಬಂಧಿತ ಸುದ್ದಿ