ಬೆಂಗಳೂರು: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 263 ಮಂದಿಗೆ ಸೋಂಕು ತಗುಲಿದ್ದು, ಈವರೆಗೂ 30,00,934 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.36ನಷ್ಟಿದೆ. ಇಂದು 71,308 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 327 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,55,465 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 7 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,275ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 7,165 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.66ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 158 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,59,183ಕ್ಕೆ ಏರಿಕೆಯಾಗಿದೆ 182 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,37,306ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,370 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,506 ಸಕ್ರಿಯ ಪ್ರಕರಣಗಳಿವೆ.
PublicNext
14/12/2021 07:08 pm