ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮತ್ತೆ 300ರ ಗಡಿ ದಾಟಿದ ಕೊರೊನಾ- 301 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ 300ರ ಗಡಿ ದಾಟಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ನಿನ್ನೆ (ಮಂಗಳವಾರ) 263 ಮಂದಿಗೆ ಸೋಂಕು ತಗುಲಿತ್ತು. ಇಂದು 317 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈವರೆಗೂ 30,01,251 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಪಾಸಿಟಿವಿಟಿ ದರ ಶೇ 0.26ನಷ್ಟಿದೆ. ಇಂದು 1,19,845 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 301 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,55,766 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,277ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 7,179 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.63ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 205 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,59,388ಕ್ಕೆ ಏರಿಕೆಯಾಗಿದೆ 139 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,37,445ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,372 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,570 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

15/12/2021 07:15 pm

Cinque Terre

83.31 K

Cinque Terre

2

ಸಂಬಂಧಿತ ಸುದ್ದಿ