ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ದೆಹಲಿಯಲ್ಲಿ ಮತ್ತೆ 4 ಒಮಿಕ್ರಾನ್ ಕೇಸ್ ಪತ್ತೆ : ಒಟ್ಟು ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆ

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಮಿಕ್ರಾನ್ ರೂಪಾಂತರಗಳ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಇಂದು ನಾಲ್ವರಲ್ಲಿ ಈ ವೈರಸ್ ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಈ ಕುರಿತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಈ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಸೋಂಕಿತರಲ್ಲಿ ಒಬ್ಬರು ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ತಿಳಿಸಿದರು. ಉಳಿದ 9 ಮಂದಿ ಲೋಕನಾಯಕ ಜೈ ಪ್ರಕಾಶ್ ಆಸ್ಪತ್ರೆಯಲ್ಲಿ (ಎಲ್ ಎನ್ ಜೆಪಿ) ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ ಎಂದು ತಿಳಿಸಿದ್ದಾರೆ.

ದೆಹಲಿ ಸರ್ಕಾರವು ಕೋವಿಡ್ -19 ನಿರ್ಬಂಧಗಳನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ.

ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರವು ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆಗಳನ್ನು ಸೀಮಿತಗೊಳಿಸಿದೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA) ಬುಧವಾರ COVID-19 ಗೆ ಸಂಬಂಧಿಸಿದ ನಿರ್ಬಂಧಗಳನ್ನು ಡಿಸೆಂಬರ್ 31 ರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ.

ಸದ್ಯಕ್ಕೆ ದೆಹಲಿಯಲ್ಲಿ ಸಾಮಾಜಿಕ, ಧಾರ್ಮಿಕ, ಮನರಂಜನಾ ಕಾರ್ಯಕ್ರಮಗಳ ಮೇಲಿನ ನಿಷೇಧ ಮುಂದುವರಿಯಲಿದೆ. ಜೊತೆಗೆ ಬಾರ್ ಆ್ಯಂಡ್ ರೆಸ್ಟೊರೆಂಟ್ ನಲ್ಲಿ ಶೇ.50ರಷ್ಟು ಸಾಮರ್ಥ್ಯ ನಿಯಮ ಮೊದಲಿನಂತೆಯೇ ಮುಂದುವರಿಯಲಿದೆ.

Edited By : Nirmala Aralikatti
PublicNext

PublicNext

16/12/2021 12:34 pm

Cinque Terre

50 K

Cinque Terre

1