ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಕೊಂಚ ಮಟ್ಟಿಗೆ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 238 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 30,01,792 ಜನರಿಗೆ ಸೋಂಕು ತಗುಲಿದ್ದು 38282 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 317 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,56,405 ಕ್ಕೆ ಏರಿಕೆಯಾಗಿದೆ. ಇನ್ನು 7,076 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ ಕೊರೊನಾ ಸಕಾರಾತ್ಮಕತೆ ದರ 0.20%ನಷ್ಟಿದೆ. ಹಾಗೂ ಮರಣ ಪ್ರಮಾಣ 1.26%ನಷ್ಟಿದೆ. ಇದೇ ಅವಧಿಯಲ್ಲಿ ಕೊರೊನಾ ಸೋಂಕು ಪತ್ತೆಗಾಗಿ 1,17,058 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರೆದಿದ್ದು, ಇಂದು 153 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,59,738ಕ್ಕೆ ಏರಿಕೆಯಾಗಿದೆ. 185 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,37,765ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,376 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 5596 ಸಕ್ರಿಯ ಪ್ರಕರಣಗಳಿವೆ.
PublicNext
17/12/2021 07:40 pm