ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 335 ಜನರಿಗೆ ಕೊರೊನಾ ಸೋಂಕು: ಐವರು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಇರುವಿಕೆಯನ್ನು ಪ್ರದರ್ಶಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ 335 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 5 ಜನ ಬಲಿಯಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 30,02,127 ಜನರಿಗೆ ಸೋಂಕು ತಗುಲಿದ್ದು, 38287 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 286 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,56,691ಕ್ಕೆ ಏರಿಕೆಯಾಗಿದೆ. ಇನ್ನು 7,120 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 0.28%ನಷ್ಟಿದೆ. ಹಾಗೂ ಮರಣ ಪ್ರಮಾಣ 1.49% ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 1,18,032 ಜನರನ್ನು ಕೊರೊನಾ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 225 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,59,963ಕ್ಕೆ ಏರಿಕೆಯಾಗಿದೆ. 180 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,37,945ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಒಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,377 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5,640 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

18/12/2021 08:17 pm

Cinque Terre

66.68 K

Cinque Terre

1

ಸಂಬಂಧಿತ ಸುದ್ದಿ