ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿಂದು 300 ಮಂದಿಗೆ ವಕ್ಕರಿಸಿದ ಕೋವಿಡ್

ಬೆಂಗಳೂರು : ರಾಜ್ಯದಲ್ಲಿಂದು 300 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3002427 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 112524 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.26% ಕ್ಕೆ ಕುಸಿದಿದೆ.

ರಾಜ್ಯದಲ್ಲಿ ಇಂದು 279 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2956970 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 01 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38288 ಕ್ಕೆ ಏರಿಕೆಯಾಗಿದೆ. 7140 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.33% ನಷ್ಟಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 168 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1260131 ಕ್ಕೆ ಏರಿಕೆಯಾಗಿದೆ. 148 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1238093 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿನಿಂದ ಯಾವ ಸಾವು ಸಮಭವಿಸಿಲ್ಲ. ಈವೆರಗೂ ಒಟ್ಟು 16377 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5660ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
PublicNext

PublicNext

19/12/2021 07:33 pm

Cinque Terre

47.64 K

Cinque Terre

0