ಬೆಂಗಳೂರು : ರಾಜ್ಯದಲ್ಲಿಂದು 222 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3002649 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 87469 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.25% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 286 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2957256 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 02 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38290 ಕ್ಕೆ ಏರಿಕೆಯಾಗಿದೆ. 7074 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.90% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 146 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1260277 ಕ್ಕೆ ಏರಿಕೆಯಾಗಿದೆ. 147 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1238240 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿನಿಂದ ಇಂದು ಒಂದು ಸಾವು ಸಮಭವಿಸಿದೆ. ಈವೆರಗೂ ಒಟ್ಟು 16378 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5658ಸಕ್ರಿಯ ಪ್ರಕರಣಗಳಿವೆ.
PublicNext
20/12/2021 07:26 pm