ಬೆಂಗಳೂರು : ರಾಜ್ಯದಲ್ಲಿಂದು 295 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3002944 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 75639 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.39% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2957546 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 05ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38295 ಕ್ಕೆ ಏರಿಕೆಯಾಗಿದೆ. 7074 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.69% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 204 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1260481 ಕ್ಕೆ ಏರಿಕೆಯಾಗಿದೆ. 171 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1238411 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವೆರಗೂ ಒಟ್ಟು 16378 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5691 ಸಕ್ರಿಯ ಪ್ರಕರಣಗಳಿವೆ.
PublicNext
21/12/2021 07:20 pm