ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮುಂಜಾನೆ
ಲಂಡನ್ ಮತ್ತು ಕುವೈಟ್ ನಿಂದ ಬಂದಿದ್ದ ನಾಲ್ವರಿಗೆ ಸೋಂಕು ತಗುಲಿರುವುದು ಪರೀಕ್ಷೆ ವೇಳೆ ದೃಢ ಪಟ್ಟಿದೆ.
ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರಲ್ಲಿ RTPCR ಟೆಸ್ಟ್ ವೇಳೆ ಸೋಂಕಿರುವುದು ಪತ್ತೆಯಾಗಿದ್ದು, ಎಲ್ಲರನ್ನೂ
ಬೌರಿಂಗ್ ಆಸ್ಪತ್ರೆಯ ಐಸೋಲೇಷನ್ ನಲ್ಲಿರಿಸಲಾಗಿದೆ.
ಹೆಚ್ಚಿನ ಟೆಸ್ಟ್ ಗಾಗಿ ಸ್ಯಾಂಪಲ್ ಪಡೆದು ಜಿನೋಟಿಕ್ ಸೀಕ್ವೆನ್ಸ್ ಗಾಗಿ ಅಧಿಕಾರಿಗಳು ಕಳುಹಿಸಿದ್ದಾರೆ. ಸೋಂಕಿತರ ಜೊತೆಯಲ್ಲಿ ಬಂದವರ ವಿಳಾಸ, ಫೋನ್ ನಂಬರ್ ಪಡೆದು ಹೋಂ ಕ್ವಾರಂಟೈನ್ ನಲ್ಲಿರಲು ಸಹ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ.
PublicNext
22/12/2021 10:30 am