ಬೆಂಗಳೂರು : ರಾಜ್ಯದಲ್ಲಿಂದು 321 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3003265 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 97897 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.32% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 253 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2957799 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 04ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38299 ಕ್ಕೆ ಏರಿಕೆಯಾಗಿದೆ. 7138 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.24% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 211 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1260692 ಕ್ಕೆ ಏರಿಕೆಯಾಗಿದೆ. 162 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1238573 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವೆರಗೂ ಒಟ್ಟು 16378 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5740 ಸಕ್ರಿಯ ಪ್ರಕರಣಗಳಿವೆ.
PublicNext
22/12/2021 07:05 pm