ಬೆಂಗಳೂರು : ರಾಜ್ಯದಲ್ಲಿಂದು 299 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3003564 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 127098 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.23% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 318 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2958117 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 02 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38301 ಕ್ಕೆ ಏರಿಕೆಯಾಗಿದೆ. 7117 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.66% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 210 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1260902 ಕ್ಕೆ ಏರಿಕೆಯಾಗಿದೆ. 207 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1238780 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿನಿಂದ ಒಂದು ಸಾವು ಸಂಭವಿಸಿದೆ. ಈವೆರಗೂ ಒಟ್ಟು 16379 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5742 ಸಕ್ರಿಯ ಪ್ರಕರಣಗಳಿವೆ.
PublicNext
23/12/2021 07:26 pm