ಬೆಂಗಳೂರು : ರಾಜ್ಯದಲ್ಲಿಂದು 405 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3003969 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 114559 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.35% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 267 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2958384 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 04 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38305 ಕ್ಕೆ ಏರಿಕೆಯಾಗಿದೆ. 7251 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.98% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 254 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1261156 ಕ್ಕೆ ಏರಿಕೆಯಾಗಿದೆ. 128 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1238908 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿನಿಂದ 02 ಸಾವು ಸಂಭವಿಸಿದೆ. ಈವೆರಗೂ ಒಟ್ಟು 16381 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5866 ಸಕ್ರಿಯ ಪ್ರಕರಣಗಳಿವೆ.
PublicNext
24/12/2021 07:27 pm