ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗಿನಲ್ಲಿ ಕೋವಿಡ್ ಸ್ಫೋಟ: 30 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ!

ಕೊಡಗು : ಕೊರೊನಾ ಆತಂಕ ತಗ್ಗಿದ ಹಿನ್ನೆಲೆಯಲ್ಲೇ ರಾಜ್ಯದ್ಯಂತ ಶಾಲಾ ಕಾಲೇಜುಗಳನ್ನು ಆರಂಭಿಸಲಾಗಿತ್ತು. ಈ ಬೆನ್ನಲ್ಲೇ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರ ಮತ್ತು ಸ್ಥಳಿಯ ಆಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ.

ಆದಾಗ್ಯೂ ಈಗ ಕೊಡಗಿನ ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ಕೊಡಗಿನ ಜ್ಞಾನ ಗಂಗಾ ಶಾಲೆಯ 26 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಕುಶಾಲನಗರ ತಾಲೂಕಿನ ಅತ್ತೂರುವಿನಲ್ಲಿನ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಜತೆಗೆ ಪೊನ್ನಂಪೇಟೆಯ ಜೂನಿಯರ್ ಕಾಲೇಜಿನಲ್ಲಿ 6 ವಿದ್ಯಾರ್ಥಿಗಳಿಗೆ ಕೊರೊನಾ ವಕ್ಕರಿಸಿದೆ.

ಒಟ್ಟು 30ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಬೆನ್ನಲ್ಲೆ ತಾಲೂಕಿನ ಜನರಲ್ಲಿ ಆತಂಕ ಮನೆ ಮಾಡಿದೆ.

Edited By : Nirmala Aralikatti
PublicNext

PublicNext

25/12/2021 06:12 pm

Cinque Terre

33.32 K

Cinque Terre

1