ಬೆಂಗಳೂರು : ರಾಜ್ಯದಲ್ಲಿಂದು 270 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3004239 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 97782 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.27% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 246 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2958630 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 04 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38309 ಕ್ಕೆ ಏರಿಕೆಯಾಗಿದೆ. 7271 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.48% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 152 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1261308 ಕ್ಕೆ ಏರಿಕೆಯಾಗಿದೆ. 126 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1239034 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿನಿಂದ 02 ಸಾವು ಸಂಭವಿಸಿದೆ. ಈವೆರಗೂ ಒಟ್ಟು 16383 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5890 ಸಕ್ರಿಯ ಪ್ರಕರಣಗಳಿವೆ.
PublicNext
25/12/2021 07:21 pm