ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಭಾವ ಇನ್ನೂ ಕಡಿಮೆಯಾಗಿಲ್ಲ ಎಂಬುದು ಸಾಬೀತಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 348 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಮೂವರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 30,04,587 ಜನರಿಗೆ ಸೋಂಕು ತಗುಲಿದ್ದು,38,312 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 198 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,58,828ಕ್ಕೆ ಏರಿಕೆಯಾಗಿದೆ. ಇನ್ನು 7,418 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 0.47%ನಷ್ಟಿದೆ. ಹಾಗೂ ಮರಣ ಪ್ರಮಾಣ 0.86%ನಷ್ಟಿದೆ. ಹಾಗೂ ಇದೇ ಅವಧಿಯಲ್ಲಿ 73,894 ಜನರನ್ನು ಕೊರೊನಾ ಖಚಿತತೆ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 248 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,61,556ಕ್ಕೆ ಏರಿಕೆಯಾಗಿದೆ. 88 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,39,122ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,385 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,048 ಸಕ್ರಿಯ ಪ್ರಕರಣಗಳಿವೆ.
PublicNext
26/12/2021 08:24 pm