ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಲೆ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿಂತಿಲ್ಲ. ಕಳೆದ 24 ಗಂಟೆಗಳಲ್ಲಿ 289 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ನಾಲ್ವರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 30,04,876 ಜನರಿಗೆ ಸೋಂಕು ತಗುಲಿದ್ದು, 38,316 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 254 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,082ಕ್ಕೆ ಏರಿಕೆಯಾಗಿದೆ. ಇನ್ನು 7,449 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 0.49%ನಷ್ಟಿದೆ. ಹಾಗೂ ಮರಣ ಪ್ರಮಾಣ 1.38%ನಷ್ಟಿದೆ. ಇದೇ ಅವಧಿಯಲ್ಲಿ 58,495 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 172 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,61,728ಕ್ಕೆ ಏರಿಕೆಯಾಗಿದೆ. 155 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,39,277ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,387 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,063 ಸಕ್ರಿಯ ಪ್ರಕರಣಗಳಿವೆ.
PublicNext
27/12/2021 07:29 pm