ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಆರ್ಭಟ ಇನ್ನೂ ನಿಂತಿಲ್ಲ. ನಿನ್ನೆಗಿಂತ ಇಂದು ಸೋಂಕು ತಗುಲಿದವರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 356 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇಬ್ಬರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 30,05,232 ಜನರಿಗೆ ಸೋಂಕು ತಗುಲಿದ್ದು, 38,318 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 347 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,429 ಕ್ಕೆ ಏರಿಕೆಯಾಗಿದೆ. ಇನ್ನು 7,456 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 0.50%ನಷ್ಟಿದೆ. ಹಾಗೂ ಮರಣ ಪ್ರಮಾಣ 0.56%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 69,993 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 269 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,61,997 ಕ್ಕೆ ಏರಿಕೆಯಾಗಿದೆ. 209 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,39,486ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16388 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ,6,122 ಸಕ್ರಿಯ ಪ್ರಕರಣಗಳಿವೆ.
PublicNext
28/12/2021 07:48 pm