ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹರಡುವಿಕೆ ನಿನ್ನೆಗಿಂತ ಇಂದು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 566 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 6 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 30,05,798 ಜನರಿಗೆ ಸೋಂಕು ತಗುಲಿದ್ದು, 38,324 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 245 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,674 ಕ್ಕೆ ಏರಿಕೆಯಾಗಿದೆ. ಇನ್ನು 7,771 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನ ಖಚಿತತೆಯ ಪ್ರಮಾಣ 0.52%ನಷ್ಟಿದೆ. ಹಾಗೂ ಮರಣ ಪ್ರಮಾಣ 1.06%ನಷ್ಟಿದೆ. ಇದೇ ಅವಧಿಯಲ್ಲಿ 1,08,726 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 400 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,62,397ಕ್ಕೆ ಏರಿಕೆಯಾಗಿದೆ.
130 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,39,616ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,392 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,388 ಸಕ್ರಿಯ ಪ್ರಕರಣಗಳಿವೆ.
PublicNext
29/12/2021 07:46 pm