ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಳೆದ ಮೂರ್ನಾಲ್ಕು ದಿನಗಳಿಂದ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 707 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 30,06,505 ಜನರಿಗೆ ಸೋಂಕು ತಗುಲಿದ್ದು, 38,327 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 252 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,926ಕ್ಕೆ ಏರಿಕೆಯಾಗಿದೆ. ಇನ್ನು 8,223 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ 0.61%ನಷ್ಟಿದೆ. ಮರಣ ಪ್ರಮಾಣ 0.42%ನಷ್ಟಿದೆ. ಹಾಗೂ ಇದೇ ಅವಧಿಯಲ್ಲಿ 1,14,686 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 565 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,62,962 ಕ್ಕೆ ಏರಿಕೆಯಾಗಿದೆ. 104 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,39,720 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,395 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6846 ಸಕ್ರಿಯ ಪ್ರಕರಣಗಳಿವೆ.
PublicNext
30/12/2021 07:32 pm