ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿನ್ನೆಗಿಂತ ಮತ್ತೆ ಏರಿದ ಕೊರೊನಾ: ಇಂದು 832 ಜನರಿಗೆ ಸೋಂಕು, 8 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 832 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 8 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 30,07,337 ಜನರಿಗೆ ಸೋಂಕು ತಗುಲಿದ್ದು, 38,335 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 335 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,60,261ಕ್ಕೆ ಏರಿಕೆಯಾಗಿದೆ. ಇನ್ನು 8,712 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ 24 ಗಂಟೆಗಳಲ್ಲಿ ಕೊರೊನಾ ಪಾಸಿಟಿವಿಟಿ ದರ 0.70%ನಷ್ಟಿದೆ. ಹಾಗೂ ಕೊರೊನಾ ಮರಣ ಪ್ರಮಾಣ 0.96%ನಷ್ಟಿದೆ. ಇದೇ ಅವಧಿಯಲ್ಲಿ 11,7,917 ಜನರನ್ನು ಕೊರೊನಾ ಖಚಿತತೆಯ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು ಇಂದು 656 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,63,618ಕ್ಕೆ ಏರಿಕೆಯಾಗಿದೆ. 211ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,39,931ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಐವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,400 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,286 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

31/12/2021 07:42 pm

Cinque Terre

64.82 K

Cinque Terre

5