ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೊಮ್ಮೆ ತನ್ನ ಅಟ್ಟಹಾಸ ಮೆರೆಯುವ ಲಕ್ಷಣಗಳು ಕಂಡುಬರುತ್ತಿವೆ. ಸುಮಾರು ದಿನಗಳಿಂದ ಕೊರೊನಾ ಸೋಂಕು ಏರಿಕೆಯ ಹಾದಿಯಲ್ಲಿದೆ. ಕಳೆದ 24 ಗಂಟೆಗಳಲ್ಲಿ 1,033 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಐವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ,ರಾಜ್ಯದಲ್ಲಿ ಈವರೆಗೂ 30,08,370 ಜನರಿಗೆ ಸೋಂಕು ತಗುಲಿದ್ದು 38,340 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 354 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,60,615ಕ್ಕೆ ಏರಿಕೆಯಾಗಿದೆ. ಇನ್ನು 9,386 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 0.86%ನಷ್ಟಿದೆ. ಹಾಗೂ ಮರಣ ಪ್ರಮಾಣ 0.48%ನಷ್ಟಿದೆ. ಇದೇ ಅವಧಿಯಲ್ಲಿ 1,19,225 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ : ರಾಜ್ಯ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 810 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,64,428ಕ್ಕೆ ಏರಿಕೆಯಾಗಿದೆ. 218ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,40,149 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,402 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,876 ಸಕ್ರಿಯ ಪ್ರಕರಣಗಳಿವೆ.
PublicNext
01/01/2022 07:19 pm