ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೊಮ್ಮೆ ತನ್ನ ಅಟ್ಟಹಾಸ ಮೆರೆಯುವ ಲಕ್ಷಣಗಳು ಕಂಡುಬರುತ್ತಿವೆ. ಸುಮಾರು ದಿನಗಳಿಂದ ಕೊರೊನಾ ಸೋಂಕು ಏರಿಕೆಯ ಹಾದಿಯಲ್ಲಿದೆ. ಕಳೆದ 24 ಗಂಟೆಗಳಲ್ಲಿ 1,187 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಐವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ,ರಾಜ್ಯದಲ್ಲಿ ಈವರೆಗೂ 30,09557 ಜನರಿಗೆ ಸೋಂಕು ತಗುಲಿದ್ದು 38,346 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು
275 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,60,890ಕ್ಕೆ ಏರಿಕೆಯಾಗಿದೆ. ಇನ್ನು 10,292 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 1.08% ನಷ್ಟಿದೆ. ಹಾಗೂ ಮರಣ ಪ್ರಮಾಣ 0.50% ನಷ್ಟಿದೆ. ಇದೇ ಅವಧಿಯಲ್ಲಿ 108911 ಜನರನ್ನು ಕೊರೊನಾ ಪಾಸಿಟಿವಿಟಿ ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ : ರಾಜ್ಯ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 923 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1265351 ಕ್ಕೆ ಏರಿಕೆಯಾಗಿದೆ. 218ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1240274 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 3 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16405 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 8671 ಸಕ್ರಿಯ ಪ್ರಕರಣಗಳಿವೆ.
PublicNext
02/01/2022 07:13 pm