ಪ್ರಧಾನಿ ನರೇಂದ್ರ ಮೋದಿ ಅವರು, ಇಂದಿನಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಪ್ರಾರಂಭಸಿದ್ದು, ತಪ್ಪದೇ ಲಸಿಕೆ ಪಡೆಯಿರಿ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್ ಅವರು ತುಮಕೂರು ಜಿಲ್ಲೆಯ ತಿಪಟೂರಿನ ತಮ್ಮ ನಿವಾಸದಲ್ಲಿ ಮನವಿ ಮಾಡಿದರು.
ಕೋವಿಡ್ ನಿಂದ ಮಕ್ಕಳ ಶಿಕ್ಷಣ ಅಪೂರ್ಣವಾಗಬಾರದು ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಪ್ರತಿ ಪೋಷಕರು ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಕೋವಿಡ್ ಲಸಿಕೆ ಪಡೆದ ನಂತರವೂ, ಸೂಕ್ತ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಈ ಮೂಲಕ ಸಂಭವನೀಯ ಮೂರನೇ ಅಲೆ ಬಾರದಂತೆ ತಡೆಗಟ್ಟಬೇಕು ಎಂದು ಕೋರಿದರು.
ಜೊತೆಗೆ ಮಾಸ್ಕ್ ಧರಿಸಿ, ಭೌತಿಕ ಅಂತರ ಕಾಯ್ದುಕೊಳ್ಳಿ, ನೈರ್ಮಲ್ಯ ಪಾಲಿಸಿ, ಸುರಕ್ಷತಾ ನಿಯಮಗಳನ್ನು ನಿರ್ಲಕ್ಷಿಸಬೇಡಿ. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ ಎಂದರು.
- ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್
PublicNext
03/01/2022 01:51 pm