ಬೆಂಗಳೂರು : ರಾಜ್ಯದಲ್ಲಿಂದು 1290 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3010847 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 80409 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 1.60% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 232 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2961122 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 05 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38351 ಕ್ಕೆ ಏರಿಕೆಯಾಗಿದೆ. 11345 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.38% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 1041 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1266392 ಕ್ಕೆ ಏರಿಕೆಯಾಗಿದೆ. 134 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1240408 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 03 ಸಾವು ಸಂಭವಿಸಿದ್ದು ಈವೆರಗೂ ಒಟ್ಟು 16408 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 9575 ಸಕ್ರಿಯ ಪ್ರಕರಣಗಳಿವೆ.
PublicNext
03/01/2022 07:34 pm