ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು ಇಂದು ಮಂಗಳವಾರ ರಾಜ್ಯದಲ್ಲಿ ಒಟ್ಟು 2,479 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಸಚಿವ ಸುಧಾಕರ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲೇ ಅತೀ ಹೆಚ್ಚು 2053 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ, ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 2.59% ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ರಾಜ್ಯದಲ್ಲಿ ಇಂದು ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 95,391 ಪರೀಕ್ಷೆ ನಡೆಸಲಾಗಿದೆ.
ಇಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿಲ್ಲ. ಇದುವರೆಗೆ ಒಟ್ಟು 77 ಒಮಿಕ್ರಾನ್ ಕೇಸ್ ಪತ್ತೆಯಾಗಿವೆ.ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ತಡೆಗೆ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
PublicNext
04/01/2022 06:05 pm