ಬೆಂಗಳೂರು : ರಾಜ್ಯದಲ್ಲಿಂದು 2479 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3013326 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 95391 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ರೇಟ್ 2.59% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 288ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2961410 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಇಂದು ಈ ಡೆಡ್ಲಿ ಸೋಂಕಿಗೆ 04 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38355 ಕ್ಕೆ ಏರಿಕೆಯಾಗಿದೆ. 13532 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.16% ನಷ್ಟಿದೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 2053 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1268445 ಕ್ಕೆ ಏರಿಕೆಯಾಗಿದೆ. 202 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1240610 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 03 ಸಾವು ಸಂಭವಿಸಿದ್ದು ಈವೆರಗೂ ಒಟ್ಟು 16411 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 11423 ಸಕ್ರಿಯ ಪ್ರಕರಣಗಳಿವೆ.
PublicNext
04/01/2022 07:23 pm