ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಬೆಣ್ಣೆನಗರಿಯಲ್ಲಿಯೂ ಹೈಅಲರ್ಟ್

ದಾವಣಗೆರೆ: ಕೊರೊನಾ ಹಾಗೂ ಒಮಿಕ್ರಾನ್ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಮೂರನೇ ಅಲೆ ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯಲ್ಲಿ ಸಜ್ಜಾಗಿದೆ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಈಗ ಜಾಸ್ತಿ ಇಲ್ಲ. ಎರಡು ದಿನಗಳಲ್ಲಿ ಇದು ಮತ್ತಷ್ಟು ಜಾಸ್ತಿಯಾಗಬಹುದು.

ಯಾವುದೇ ಕಾರಣಕ್ಕೂ ಜನರು ಮೈಮರೆಯಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮನವಿ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ. ದಾವಣಗೆರೆ ಜಿಲ್ಲೆಯ ಹರಿಹರ ಮೂಲದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಬೆಂಗಳೂರಿನಲ್ಲಿಯೇ

ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಈಗ ಅವರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಕೊರೊನಾ ಮೊದಲನೇ ಹಾಗೂ ಎರಡನೇ ಅಲೆ ಎದುರಿಸಿದ್ದೇವೆ. ಈ ಬಾರಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದು ಕೊಳ್ಳಲಾಗಿದೆ. ಮೂರು ಸಾವಿರ ಬೆಡ್ ಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಿಗೆ ಸರ್ಕಾರ ನಿಗದಿಪಡಿಸಿರುವ ಬೆಡ್ ಗಳನ್ನು ನೀಡಬೇಕೆಂದು ಸೂಚನೆ ನೀಡಲಾಗಿದೆ. ಆಕ್ಸಿಜನ್, ಆಕ್ಸಿಜನ್ ಪ್ಲಾಂಟ್, ವೈದ್ಯಕೀಯ ಪರಿಕರಗಳು ಸೇರಿದಂತೆ ಎಲ್ಲಾ ರೀತಿಯ ವೈದ್ಯಕೀಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

Edited By : Shivu K
PublicNext

PublicNext

05/01/2022 05:13 pm

Cinque Terre

55.32 K

Cinque Terre

1