ಬೆಂಗಳೂರು: ಹೆಮ್ಮಾರಿ ಸೋಂಕು ಮತ್ತೆ ತನ್ನ ಆರ್ಭಟ ಶುರು ಮಾಡಿದೆ. ಕಳೆದ 24 ಗಂಟೆಯಲ್ಲಿ 4246 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವ್ ಪ್ರಮಾಣ ಶೇ. 3.3ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.
ಇನ್ನು ಹೆಮ್ಮಾರಿ ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38357ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 3605 ಮಂದಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವ್ ಪ್ರಮಾಣ ಶೇ.6.45ಕ್ಕೆ ಏರಿಕೆಯಾಗಿದೆ.
PublicNext
05/01/2022 06:38 pm